ಸೆಪ್ಟೆಂಬರ್ 24ಕ್ಕೆ ‘ಸೆಲ್ಕೊ’ದಿಂದ ಸೂರ್ಯಮಿತ್ರ ಪ್ರಶಸ್ತಿ ಪ್ರದಾನ

ಹೊಸದಿಗಂತ ವರದಿ ಬೆಂಗಳೂರು:

ಸಾಮಾಜಿಕ ಉದ್ಯಮವಾಗಿರುವ ಸೆಲ್ಕೋ ಸಂಸ್ಥೆಯು ಕೊಡಮಾಡುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 24ರಂದು ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಸೌರಶಕ್ತಿಯ ಆದ್ಯ ಪ್ರವರ್ತಕರು, ಪ್ರಪಂಚದಾದ್ಯಂತ ಸೌರಶಕ್ತಿಯ ಉಪಯೋಗಗಳನ್ನು ಉತ್ತೇಜಿಸುತ್ತಿರುವ ಪತ್ರಕರ್ತ ನೇವಿಲ್ಲೆ ವಿಲಿಯಮ್ಸ್ ಅವರು 2020ನೇ ಸಾಲಿನ ಪ್ರಶಸ್ತಿಗೆ, 2021ನೇ ಸಾಲಿನ ಪ್ರಶಸ್ತಿಗೆ ಇಂಧನ ಬಳಕೆ ಕುರಿತ ಜಾಗತಿಕ ಮನ್ನಣೆ ಪಡೆದ ಪ್ರಮುಖ ತಜ್ಞರು ಹಾಗೂ ಅನೇಕ ಜಾಗತಿಕ ಸಂಸ್ಥೆಗಳ ಮಾರ್ಗದರ್ಶಕರೂ ಆದ ರಿಚೆಂಡಾ ವಾನ್ ಲೀವೆನ್ ಅವರು ಹಾಗೂ 2022ನೇ ಸಾಲಿನ ಪ್ರಶಸ್ತಿಗೆ, ನವೀಕರಿಸಬಹುದಾದ ಇಂಧನ ಆಧಾರಿತ ಪರಿಹಾರಗಳ ಏಕೀಕರಣದ ಮೂಲಕ ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಮೂಲ ಸೌಕರ್ಯಗಳನ್ನು ಬಲಪಡಿಸುವ ಕೆಲಸ ಮಾಡುತ್ತಿರುವ ಸ್ವಾಮಿ ವಿವೇಕಾನಂದ ಯೂಥ್ ಮೂವ್ಮೆಂಟ್ (ಎಸ್ ವಿ ವೈಎಂ) ಸರ್ಕಾರೇತರ ಸಂಸ್ಥೆಯು ಪಾತ್ರವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!