spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅ.17ರಂದು ಭೂಮಿ ಕಂಪಿಸಿದ ಗ್ರಾಮಗಳಿಗೆ ಎನ್.ಜಿ.ಅರ್.ಐ ತಂಡ ಭೇಟಿ

- Advertisement -Nitte

ಹೊಸ ದಿಗಂತ ವರದಿ, ಕಲಬುರಗಿ:

ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಕೆಲವೆಡೆ ಕಳೆದ 10 ದಿನದಿಂದ ಭೂಕಂಪನವಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ (ಅ.17) ಜಿಲ್ಲೆಗೆ ಹೈದ್ರಾಬಾದಿನಿಂದ ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆಯ (ಎನ್.ಜಿ.ಆರ್.ಐ) ವಿಜ್ಞಾನಿಗಳ ತಂಡ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದರು.

ಶನಿವಾರ ಜಿಲ್ಲೆಯ ಕಾಳಗಿ ತಾಲ್ಲೂಕಿನ ಹೊಸಳ್ಳಿ-ಹೆಚ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ
ಜಿಲ್ಲಾಧಿಕಾರಿಗಳ ನಡೆ- ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂಕಂಪನ ಪೀಡಿತ ಪ್ರದೇಶಗಳಿಗೆ ತಂಡವು ಭೇಟಿ ನೀಡಿ ಭೌಗೋಳಿಕವಾಗಿ ಸರ್ವೆ ಮಾಡಲಿದೆ ಎಂದರು.

ರಿಕ್ಟರ್ ಸ್ಕೇಲ್ ಪ್ರಕಾರ ಜಿಲ್ಲೆಯಲ್ಲಿ 1 ರಿಂದ 3 ರಷ್ಟು ಭೂಕಂಪನದ ವರದಿಯಾಗಿದ್ದರಿಂದ ಗಡಿಕೇಶ್ವರದಲ್ಲಿ 5 ಮನೆ ಭಾಗಶ ಜಖಂಗೊಂಡಿದ್ದನ್ನು ಬಿಟ್ಟಿದರೆ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಕಾಳಗಿ ತಾಲೂಕಿನ 5 ಕಡೆ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಸುಮಾರು 5 ಸಾವಿರ ಜನರಿಗೆ ಊಟ ನೀಡಲಾಗುತ್ತಿದೆ. ನಿರಾಶ್ರಿತ ಕೇಂದ್ರದಲ್ಲಿಯೇ ವಾಸಿಸುವವರಿಗೆ ಬೆಡ್ ಶೀಟ್ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ ಎಂದರು.

ಹೊಸಳ್ಳಿ (ಹೆಚ್) ಸೇರಿದಂತೆ ಭೂಕಂಪನದ ವರದಿಯಾಗಿರುವ ಕಾಳಗಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಲೊಕೋಪಯೋಗಿ ಇಲಾಖೆಯ ಇಂಜಿನೀಯರ್ ಗಳಿಂದ ಕೂಡಿರುವ 6 ತಂಡ ರಚಿಸಲಾಗಿದ್ದು, ಈ ತಂಡಗಳು ಗ್ರಾಮದ ಪ್ರತಿ ಮನೆಗಳ ಸರ್ವೆ ಕೈಗೊಂಡು ಮನೆ ಮಾಲೀಕರಿಗೆ ಅಗತ್ಯವಿದ್ದರೆ ಸಣ್ಣ-ಪುಟ್ಟ ದುರಸ್ತಿ, ಮಾರ್ಪಾಡು ಮಾಡಲು ಸಲಹೆ ನೀಡಲಾಗುತ್ತಿದೆ. ಗ್ರಾಮಸ್ಥರು ಸಹಕರಿಸಬೇಕು ಎಂದು ವಿ.ವಿ.ಜ್ಯೋತ್ಸ್ನಾ ತಿಳಿಸಿದರು.

ಕಲಬುರಗಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಷ್ ಶಶಿ, ಸಹಾಯಕ ಅಯುಕ್ತೆ ಮೋನಾ ರೂಟ್, ಭೂ ದಾಖಲೆಗಳ ಉಪ ನಿರ್ದೇಶಕ ಶಂಕರ, ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಮಲ್ಲಿಕಾರ್ಜುನ ಜೇರಟಗಿ, ಕೃಷ್ಣಾ ಅಗ್ನಿಹೋತ್ರಿ, ಕೃಷಿ ಇಲಾಖೆ ಉಪನಿರ್ದೇಶಕ ಸಮದ್ ಪಟೇಲ್, ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅನೀಲ್ ರಾಠೋಡ, ಹಲಚೇರಾ ಗ್ರಾ.ಪಂ. ಅಧ್ಯಕ್ಷೆ ಶಿವಗಂಗಾ ಅಂಬ್ರೀಶ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶರಣಗೌಡ ಮಾಲಿಪಾಟೀಲ, ಪಿ.ಡಿ.ಓ ಮಹೆಬೂಬ ಪಟೇಲ್ ಸೇರಿದಂತೆ ಇನ್ನಿತರ ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳಿದ್ದರು.
ತಹಶೀಲ್ದಾರ ನಾಗನಾಥ ತರಗೆ ಸ್ವಾಗತಿಸಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss