ಮೇ 3ರಂದು ಪುನೀತ್ ಗೆ ʼಮರಣೋತ್ತರ ಬಸವಶ್ರೀ ಪ್ರಶಸ್ತಿʼ ಪ್ರದಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 3ರಂದು ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಠದಲ್ಲಿ ಬೆಳಗ್ಗೆ 11 ಗಂಟೆಗೆ ಬಸವ ಜಯಂತಿ ಅಂಗವಾಗಿ ಸರ್ವಶರಣ, ಸಂತ ಮತ್ತು ದಾರ್ಶನಿಕರ ಸ್ಮರಣೆ ಹಾಗೂ ಡಾ. ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ವಹಿಸಲಿದ್ದಾರೆ. ಗಣ್ಯರು ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!