Tuesday, June 28, 2022

Latest Posts

ಭೀಮಾತೀರದಲ್ಲಿ ಚಿರತೆ ದಾಳಿಗೆ ಎರಡು ಆಕಳುಗಳು ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ವಿಜಯಪುರ:

ಚಿರತೆ ದಾಳಿಗೆ ಎರಡು ಆಕಳುಗಳು ಬಲಿಯಾಗಿರುವ ಘಟನೆ ಜಿಲ್ಲೆಯ ಭೀಮಾತೀರದ ಆಲಮೇಲ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಇಲ್ಲಿನ ಬೊಮ್ಮನಹಳ್ಳಿ, ದೇವರನಾವದಗಿ ಗ್ರಾಮದ ಹೊಲಗಳಲ್ಲಿ ಚಿರತೆ ಓಡಾಡಿ, ಜಾನುವಾರಗಳ ಮೇಲೆ ದಾಳಿ ಮಾಡಿದ್ದು, ಇದರಿಂದ ರೈತರು ಭಯಭೀತಿಗೊಂಡಿದ್ದಾರೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸ್ಥಳಕ್ಕೆ ಮಾಜಿ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ್ದು, ಚಿರತೆಯನ್ನು ಆದಷ್ಟು ಬೇಗ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ.
ಚಿರತೆ ಕಂಡು ಬಂದ ಸ್ಥಳದಲ್ಲಿ ಅರಣ್ಯಾಧಿಕಾರಿಗಳು ಬೋನು ಇರಿಸಿ, ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಚಿರತೆ ಸೆರೆಗಾಗಿ ರೇಂಜ್ ಫಾರೆಸ್ಟ್ ಆಫೀಸರ್ ಬಿ.ಐ. ಬಿರಾದಾರ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆಗೆ ಮುಂದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss