ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾದಿ ಮಹಮದ್ ಅವರ ವಿರುದ್ಧ ಮಾತಾಡಿದ್ದೇನೆಂದು ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಿಜೆಪಿ ವಕ್ತಾರೆ ನೂಪುರ್ ಶರ್ಮ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಅವರ ಮೇಲೆಯೇ ಮುಂಬೈ ಪೋಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರವಾದಿ ಮೊಹಮದ್ ರ ವಿರುದ್ಧ ಹಾಗೂ ಅವರ ಹೆಂಡತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಆರೋಪಿಸಿ ಮುಂಬೈನ ಪೈಧೋನಿ ಪೋಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮುಂಬೈನ ರಾಝಾ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಇರ್ಫಾನ್ ಶೇಖ್ ಅವರ ಹೇಳಿಕೆಯನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದ್ದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295-ಎ (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶ), 153-ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (II) (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆ) ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಈ ಹಿಂದೆ ತನಗೆ ಕೊಲೆ ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ ಎಂದು ನೂಪುರ್ ಶರ್ಮಾ ಟ್ವೀಟರ್‌ನಲ್ಲಿ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದರು ಹಾಗೂ ದೆಹಲಿ ಪೋಲೀಸರನ್ನು ಟ್ಯಾಗ್ ಮಾಡಿದ್ದರು. ದೆಹಲಿ ಪೋಲೀಸರು ಶೀಘ್ರದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ ಎಂದು ಉತ್ತರಿಸಿದ್ದರು.