ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನಿನ್ನೆ ತಡರಾತ್ರಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಟಿಕೆಟ್ ಕೈ ತಪ್ಪಿಸ ಶಾಸಕರು ಬಿಜೆಪಿಗೆ ಗುಡ್ ಬೈ ಹೇಳುತ್ತಿದ್ದಾರೆ.
ಅದೇ ಸಾಲಿಗೆ ಇದೀಗ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸೇರಿದ್ದು, ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಟಿಕೆಟ್ ಆಕಾಂಕ್ಷಿಯಾಗಿದ್ದ ಕುಮಾರಸ್ವಾಮಿ ಬದಲು ದೀಪಕ್ ದೊಡ್ಡಯ್ಯ ಎನ್ನುವವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಅಸಮಾಧಾನದಿಂದ ಬಿಜೆಪಿಗೆ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.