ರೇಣುಕಾಸ್ವಾಮಿ ಮರ್ಡರ್‌ ದಿನ ದರ್ಶನ್‌ ಹಾಕಿದ್ದ ಚಪ್ಪಲಿ ವಿಜಯಲಕ್ಷ್ಮಿ ಮನೆಯಲ್ಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೇಣುಕಾಸ್ವಾಮಿ ಹತ್ಯೆ ದಿನ ನಟ ದರ್ಶನ್ ಧರಿಸಿದ್ದ ಶೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ ಎಂದು ಹೇಳಲಾಗಿದೆ.

ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರ ಮನೆಯಲ್ಲಿ ದರ್ಶನ್‌ ಶೂಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ನಟ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿದ್ದರು. ಬಳಿಕ ದರ್ಶನ್‌ ಶೆಡ್‌ನಿಂದ ನೇರವಾಗಿ ರಾಜರಾಜೇಶ್ವರಿನಗರದಲ್ಲಿರುವ ತನ್ನ ಮನೆಗೆ ತೆರಳಿ ಬಟ್ಟೆ ಹಾಗೂ ಶೂಗಳನ್ನು ಬದಲಿಸಿ ಸ್ನಾನ ಮಾಡಿಕೊಂಡು ಮೈಸೂರಿಗೆ ತೆರಳಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.

ಮನೆಯ ಕೆಲಸಗಾರ ಆ ಶೂಗಳನ್ನು ಹೊಸಕೆರೆಯಹಳ್ಳಿಯ ವಿಜಯಲಕ್ಷ್ಮೀ ಅವರ ಮನೆಗೆ ತೆಗೆದುಕೊಂಡು ಹೋಗಿ ಇರಿಸಿದ್ದ. ಪೊಲೀಸರು ಸ್ಥಳ ಮಹಜರು ವೇಳೆ ರಾಜರಾಜೇಶ್ವರಿನಗರದ ದರ್ಶನ್‌ ಮನೆಯಲ್ಲಿ ಕೊಲೆ ದಿನ ದರ್ಶನ್‌ ಧರಿಸಿದ್ದ ಬಟ್ಟೆಗಳನ್ನು ಜಪ್ತಿ ಮಾಡಿದ್ದರು. ಆದರೇ, ಶೂಗಳು ಮಾತ್ರ ಸಿಕ್ಕಿರಲಿಲ್ಲ. ಈ ಬಗ್ಗೆ ಆರೋಪಿಗಳನ್ನು ವಿಚಾರಣೆ ಮಾಡಿದಾಗ ದರ್ಶನ್‌ ಮನೆಯ ಕೆಲಸಗಾರ ಆ ಶೂಗಳನ್ನು ವಿಜಯಲಕ್ಷ್ಮೀ ಮನೆಗೆ ತೆಗೆದುಕೊಂಡು ಹೋಗಿರುವುದು ಗೊತ್ತಾಗಿದೆ. ಬಳಿಕ ಪೊಲೀಸರು ವಿಜಯಲಕ್ಷ್ಮೀ ಮನೆಗೆ ತೆರಳಿ ಆ ಶೂಗಳನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!