ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ‘ಗೃಹಲಕ್ಷ್ಮಿ’ಯರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವರಮಹಾಲಕ್ಷ್ಮಿ ಹಬ್ಬ ಸಮೀಪಿಸುತ್ತಿದ್ದಂತೆ ಸರ್ಕಾರ ಮಹಿಳೆಯರಿಗೆ ಶುಭ ಸುದ್ದಿ ನೀಡುವ ಸಾಧ್ಯತೆ ಇದೆ. ಗೃಹಲಕ್ಷ್ಮಿ ಹಣದ ನಿರೀಕ್ಷೆಯಲ್ಲಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಬರುವ ಸಾಧ್ಯತೆ ಇದೆ.

ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿಗೆ ಹಣ ಬಂದಿಲ್ಲ. ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಗೆ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ನಾಳೆಯ ವೇಳೆಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ವಿತರಿಸಲಾಗುವುದು ಎಂದು ವರದಿಯಾಗಿದೆ.

ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿ ಮಾಡಲಾಗಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ ಹಣ ವಿತರಿಸಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!