ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………
ಹೊಸ ದಿಗಂತ ವರದಿ, ವಿಜಯಪುರ:
ಕೃಷ್ಣಾ ನದಿಯಲ್ಲಿ ನೀರು ಕುಡಿಯಲು ಹೋದ ಯುವತಿ ಹಾಗೂ ಬಾಲಕಿಯೊಬ್ಬಳು ಸೇರಿ ಇಬ್ಬರು ನೀರು ಪಾಲಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುನಕುಂಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮೃತಪಟ್ಟವರನ್ನು ಹುನಕುಂಟಿ ನಿವಾಸಿ ಶಾಂತಮ್ಮ ನಾಗೋಡ (20), ಗುರುಸಂಗಮ್ಮ ಮುದೂರ (8) ಎಂದು ಗುರುತಿಸಲಾಗಿದೆ.
ಈ ಇಬ್ಬರು ಬಾಯಾರಿಕೆಯಿಂದ ನೀರು ಕುಡಿಯಲು ಹೋದಾಗ ಈ ಅವಘಡ ಸಂಭವಿಸಿದೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.