Sunday, December 10, 2023

Latest Posts

ರಾಜ್ಯದಲ್ಲಿ ಕಲೆಕ್ಷನ್ ಸರ್ಕಾರವಿರುವುದು ಮತ್ತೊಮ್ಮೆ ಸಾಬೀತು: ನಳಿನ್ ಕುಮಾರ್ ಕಟೀಲ್

ಹೊಸದಿಗಂತ ವರದಿ, ಮಂಗಳೂರು:

ರಾಜ್ಯದ ಆಡಳಿತ ಹಳಿತಪ್ಪಿದ್ದು, ಐಟಿ ದಾಳಿಯಿಂದಾಗಿ ಕಾಂಗ್ರೆಸ್ ನಿಜ ಬಣ್ಣ ಬಯಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಘಟನೆ ಸಾಕ್ಷಿಯಾಗಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಅಂಬಿಕಾಪತಿ ಎಂಬ ಕಾಂಟ್ರಾಕ್ಟದಾರನ ಮನೆ ಮೇಲೆ ನಡೆದ ದಾಳಿಯಲ್ಲಿ ೨೩ ಬಾಕ್ಸ್‌ಗಳಲ್ಲಿ ಸುಮಾರು ೪೨ ಕೋಟಿ ರೂಪಾಯಿ ಹಣ ಸಿಕ್ಕಿದೆ. ಹೇಮಂತ್ ಮತ್ತು ಪ್ರಮೋದ್ ಎಂಬವರ ಮನೆಗೂ ದಾಳಿಗಳಾಗಿವೆ. ಕೆಲ ದಿನಗಳ ಹಿಂದೆ ಸುಮಾರು ಕಾಂಟ್ರಾಕ್ಟುದಾರರ ಸುಮಾರು ೬೦೦ಕೋಟಿಗಳಷ್ಟು ಬಾಕಿ ಹಣವನ್ನು ಸರಕಾರ ಬಿಡುಗಡೆ ಮಾಡಿದೆ. ಈ ಎಲ್ಲಾ ಹಣ ಕಮಿಷನ್ ರೂಪದಲ್ಲಿ ಕಾಂಗ್ರೆಸ್‌ಗೆ ಸೇರಬೇಕಾದ ಹಣ ಎಂಬುದು ಬಹಿರಂಗವಾಗುತ್ತಿದೆ ಎಂದವರು ಹೇಳಿದರು.

ತೆಲಂಗಾಣದ ಚುನಾವಣೆ ಹಿನ್ನೆಲೆಯಲ್ಲಿ ಕಮಿಷನ್ ರೂಪದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿಯೂ ಇದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಸರ್ಕಾರದ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು.

ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರ್ಕಾರ ಎಂದಿದ್ದೆವು. ಅಧಿಕಾರಿಗಳ ವರ್ಗಾವಣೆಗೆ ದರ ಪಿಕ್ಸ್ ಮಾಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಇದು ಭ್ರಷ್ಟಾಚಾರಿಗಳ ಬೆಂಗಾವಲಾದ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ. ಕಾಂಗ್ರೆಸ್ ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ನಳಿನ್ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!