ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿಯಲ್ಲಿ ವಿದ್ಯುತ್ ಅವಘಡದಿಂದ 1.5 ಎಕರೆ ಅಡಿಕೆ ತೋಟ ಸುಟ್ಟು ಭಸ್ಮವಾಗಿದೆ.
ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಸವನಗೌಡ, ಶಾಂತಮ್ಮ ಎಂಬುವರ 650 ಅಡಿಕೆ ಗಿಡಗಳು ಸಂಪೂರ್ಣ ನಾಶವಾಗಿವೆ.
ಜಮೀನಿನಲ್ಲಿದ್ದ ಬೋರ್‌ವೆಲ್ ಆನ್ ಮಾಡಿದ ತಕ್ಷಣ ಬೆಂಕಿ ಕಾಣಿಸಿಕೊಂಡಿದೆ. ಅಡಿಕೆ ತೋಟದಲ್ಲಿ ಕಳೆ ನಾಶಕ ಹೊಡೆದಿದ್ದರಿಂದ ಒಣಗಿದ ಹುಲ್ಲಿಗೆ ಬೆಂಕಿ ತಗುಲಿದೆ. ನೋಡನೋಡುತ್ತಿದ್ದಂತೆಯೇ ಅಡಿಕೆ ತೋಟ ಸಂಪೂರ್ಣ ಸುಟ್ಟು ಹೋಗಿದೆ.
ಈಗ ಏಕಾಏಕಿ ಅಡಿಕೆ ಗಿಡಗಳು ಸುಟ್ಟು ಕರಕಲಾದ ಹಿನ್ನೆಲೆ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಬೆಸ್ಕಾಂನಿಂದ ರೈತರಿಗೆ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.