ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ ಪ್ರಕರಣದಲ್ಲಿ 8 ಮಂದಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್‌ನಲ್ಲಿ ಭಾನುವಾರ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಜನರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಮೊದಲ ಆರೋಪಿಯನ್ನು ಸ್ಥಳೀಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಸಫಿಕುಲ್ ಇಸ್ಲಾಂ ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ತನಿಖೆ ನಡೆಸಿದ ಬಳಿಕವೇ ನಿಖರ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.