ರಾಷ್ಟ್ರೀಯ ಹಿತಾಸಕ್ತಿಗಾಗಿ ‘ಒಂದು ದೇಶ, ಒಂದು ಚುನಾವಣೆ’: ರಾಮನಾಥ್ ಕೋವಿಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಬೇಕು ಎಂಬುದರಲ್ಲಿ ರಾಷ್ಟ್ರೀಯ ಹಿತಾಸಕ್ತಿ. ಇದು ಯಾವುದೇ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ್ದಲ್ಲ’ ಎಂದು ಮಾಜಿ ರಾಷ್ಟ್ರಪತಿ, ‘ಒಂದು ದೇಶ, ಒಂದು ಚುನಾವಣೆ’ಯ ಸಾಧ್ಯತೆಯ ಅನ್ವೇಷಿಸುವ ಸಮಿತಿಯ ಮುಖ್ಯಸ್ಥ ರಾಮನಾಥ್ ಕೋವಿಂದ್‌ ಹೇಳಿದರು.

ಸಂಸದೀಯ ಸಮಿತಿ, ನೀತಿ ಆಯೋಗ, ಚುನಾವಣಾ ಆಯೋಗವು ಸೇರಿದಂತೆ ಹಲವು ಸಮಿತಿಗಳು ‘ಒಂದು ದೇಶ, ಒಂದು ಚುನಾವಣೆ’ಯ ಸಂಪ್ರದಾಯವನ್ನು ದೇಶದಲ್ಲಿ ಪುನಶ್ಚೇತನಗೊಳಿಸುವ ಅಗತ್ಯವಿದೆ ಎಂದು ಹೇಳಿವೆ. ಇದಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳು ಸಹಕರಿಸಬೇಕು’ ಎಂದು ಮನವಿ ಮಾಡಿಕೊಳ್ಳುವೆ ಎಂದರು.

ಇದರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ನನ್ನ ನೇತೃತ್ವದಲ್ಲಿ ಸಮಿತಿ ರಚಿಸಿದೆ. ನಾವು ಜನರೊಂದಿಗೆ ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳನ್ನು ಸಂಪರ್ಕಿಸಿದ್ದು, ಸಲಹೆ ನೀಡುವಂತೆ ಕೋರಿದ್ದೇನೆ. ಎಲ್ಲರ ಬೆಂಬಲ ಸಿಕ್ಕಿದೆ. ಈ ಸಂಪ್ರದಾಯವನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬ ಕುರಿತಂತೆ ಸರ್ಕಾರಕ್ಕೆ ಸಲಹೆ ನೀಡುವೆ’ ಎಂದು ಅವರು ಹೇಳಿದರು.

ಒಂದು ದೇಶ, ಒಂದು ಚುನಾವಣೆ’ಯು ಜಾರಿಗೊಂಡರೆ ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಪ್ರಯೋಜನವಾಗಲ್ಲ . ಕೇಂದ್ರದ ಚುಕ್ಕಾಣಿ ಹಿಡಿಯಲು ಎಲ್ಲ ಪಕ್ಷಕ್ಕೂ ಇದು ಸಹಕಾರಿಯಾಗಲಿದೆ. ಇದರಲ್ಲಿ ಯಾವುದೇ ತಾರತಮ್ಯವಾಗಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here