ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೇಂದ್ರ ಸರ್ಕಾರದ ಒಂದು ದೇಶ, ಒಂದು ಸಮವಸ್ತ್ರ (One Nation One Uniform) ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ.
ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯವಾಗುವಂತೆ ಒಂದೇ ರೀತಿಯ ಸಮವಸ್ತ್ರ ಜಾರಿಗೆ ತರುವ ಬಗ್ಗೆ ಕೇಂದ್ರ ಗೃಹ ಇಲಾಖೆ, ದೇಶದ ಎಲ್ಲಾ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿತ್ತು. ಇದೀಗ ಗೃಹ ಸಚಿವ ಆರಗ ಜ್ಞಾನೇಂದ್ರ ಸಮ್ಮತಿಸಿದ್ದಾರೆ.
ರಾಜ್ಯ ಸರ್ಕಾರಗಳ ಗೃಹ ಸಚಿವರಿಗೆ ಹರ್ಯಾಣದಲ್ಲಿ ಆಯೋಜಿಸಿರುವ ಚಿಂತನ ಶಿಬಿರವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದ ಪ್ರಧಾನಿ ಮೋದಿ, ದೇಶಾದ್ಯಂತ ಇರುವ ಪೊಲೀಸರ ಗುರುತು ಅನನ್ಯವಾಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಇದು ಒಂದು ‘ಪರಿಕಲ್ಪನೆ’ ಅಷ್ಟೇ ಆಗಿದ್ದು, ಹೇರಿಕೆ ಅಲ್ಲ ಎಂದು ಹೇಳಿದ್ದ ಪ್ರಧಾನಿ ಮೋದಿ, ಇದೊಂದು ಸಲಹೆಯಾಗಿ ಪರಿಗಣಿಸುವಂತೆ ರಾಜ್ಯಗಳಿಗೆ ಅವರು ಸಲಹೆ ನೀಡಿದ್ದರು.