ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಆರ್ʼಕೆ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ 3 ಚಿತ್ರಗಳ ಪೈಕಿ ʼಒನ್ ಕಟ್ ಟು ಕಟ್ʼ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.
ನಟ ಪುನೀತ್ ರಾಜ್ ಕುಮಾರ್ ಅವರ ಪ್ರೊಡಕ್ಷನ್ ಹೌಸ್ ನಲ್ಲಿ ನಿರ್ಮಾಣವಾದ ಈ ಚಿತ್ರ ಫೆ.3ರಂದು ಅಮೆಜಾನ್ ಪ್ರೈಂ ನಲ್ಲಿ ಬಿಡುಗಡೆಯಾಗಲಿದೆ.
ಈ ಚಿತ್ರದಲ್ಲಿ ದ್ಯಾನಿಶ್ ಸೇಠ್ ಮುಖ್ಯ ಪಾತ್ರದಲ್ಲಿದ್ದಾರೆ. ಇದು ಕನ್ನಡ ಕಾಮಿಡಿ ಡ್ರಾಮ ಆಧಾರಿತ ಚಿತ್ರವಾಗಿದ್ದು, ವಂಶಿಧರ ಭೋಗರಾಜು ನಿರ್ದೇಶಿಸಿದ್ದಾರೆ. ಇದರಲ್ಲಿ ಪ್ರಕಾಶ್ ಬೆಳವಾಡಿ, ಸಂಯುಕ್ತ ಹೊರನಾಡ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.
ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಟ್ವಿಟರ್ ಮೂಲಕ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ.
#OneCutTwoCutOnPrime, Feb 3 on @PrimeVideoIN. #PrakashBelawadi #VineethBeepKumar #SampathMaitreya #Sahitanand pic.twitter.com/osQD1TDCGD
— Ashwini Puneeth Rajkumar (@ashwinipuneet) January 24, 2022