ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದೊಂದು ದಿನ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ನಿಶ್ಚಿತ, ಅದನ್ನು ಮನಸ್ಸಿನಲ್ಲಿಟ್ಟುಕೊಂಡೇ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷದ ಶಾಸಕ ಮತ್ತು ಹಿರಿಯ ರಾಜಕಾರಣಿ ಜಿಟಿ ದೇವೇಗೌಡ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಹೇಗೆ ಶಿವಕುಮಾರ್ ಬೆಂಬಲ ನೀಡಿದ್ದರೋ ಸಿದ್ದರಾಮಯ್ಯ ಸಹ ಆ ಋಣವನ್ನು ತೀರಿಸಲಿದ್ದಾರೆ ಎಂದು ದೇವೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.