ಒಂದೇ ದಿನ.. ಒಂದೇ ಕ್ಷೇತ್ರ.. ಒಂದೇ ಉದ್ದೇಶ, ಎರಡು ಪಕ್ಷಗಳ ಪ್ರಭಾವಿ ನಾಯಕರ ಪೈಪೋಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮದ ದಿನದಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ.

ಏ.29ರಂದು ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಸಮಾವೇಶ ನಡೆಯಲಿದ್ದು, ಅದೇ ದಿನ ಬಾಗಲಕೋಟೆ ಜಿಲ್ಲೆಯ ಜಮಖಂಡಿಗೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರವಾಗಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 29ರಂದು ಬೆಳಿಗ್ಗೆ 11.20ಕ್ಕೆ ಬೆಳಗಾವಿಗೆ ಆಗಮಿಸಲಿರುವ ಅವರು ಬೆಳಗಾವಿಯಿಂದ ಜಮಖಂಡಿಗೆ ಹೆಲಿಕಾಪ್ಟರ್ ನಲ್ಲಿ ತೆರಳಳಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಜಮಖಂಡಿಗೆ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಬಳಿಕ ಬೆಳಗಾವಿ ಮಾರ್ಗವಾಗಿ ಕಲಬುರಗಿ ಕಡೆಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!