ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿನಿ ಬಸ್ ಮತ್ತು ಪಿಕಪ್ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಇಂದು ನಡೆದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.