ಹೊಸದಿಗಂತ ಬಳ್ಳಾರಿ:
ಹಿರಿಯೂರು ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಳ್ಳಾರಿಯ ಬಸವೇಶ್ವರ ನಗರ ನಿವಾಸಿ ಕೋರಿ ಸುರೇಶ್ (46) ಅವರು ನಿಧನರಾಗಿದ್ದಾರೆ.
ನಗರದ ಲಿಕ್ಕರ್ ಉದ್ಯಮಿ ಸಾಹುಕಾರ್ ಸತೀಶ್ ಬಾಬು ಅವರ ಬಳಿ ಕಳೆದ ಸುಮಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಸುರೇಶ್ ಅವರು, ಬುಧವಾರ ಬೆಳಿಗ್ಗೆ ಕಾರು ಚಾಲಕರೊಂದಿಗೆ ಬೆಂಗಳೂರಿಗೆ ತೆರಳಿದ್ದು, ವಾಪಸ್ಸು ಬರುವಾಗ ನಿಯಂತ್ರಣ ತಪ್ಪಿ ಕಾರು ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ. ಕೋರಿ ಸುರೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಅಪಾರ ಬಂಧು ಬಳಗದವರು ನಗರದ ನಿವಾಸದ ಬಳಿ ಜಮಾಯಿಸಿದ್ದು, ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರಿಗೆ ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರರಿದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.