ನಶೆಯ ಏಟಿಗೆ ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀಳಗಿ ತಾಲ್ಲೂಕಿನ ಹೆಗ್ಗೂರು ಗ್ರಾಮದಲ್ಲಿ ಕುಡಿತದ ಅಮಲಿನಲ್ಲಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಸಿದ್ದಪ್ಪ ಇಂಡಿ (38) ಮೃತಪಟ್ಟ ವ್ಯಕ್ತಿ. ಕೌಟುಂಬಿಕ ಕಲಹದಿಂದ ಘಟನೆ ನಡೆದಿದೆ ಎನ್ನಲಾಗಿದೆ.

ಐದಾರು ಮಂದಿ ಮೂವರ ಮೇಲೆ ಹಲ್ಲೆ ನಡೆಸಿದ್ದು. ಈ ಗಲಾಟೆಯಲ್ಲಿ ಸಿದ್ದಪ್ಪ ಮೃತಪಟ್ಟಿದ್ದಾರೆ. ಇನ್ನು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!