ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲಾಟಿನ್ ಇಂಡಿಯಾ ಲಿಮಿಟೆಡ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಓರ್ವ ಸಾವು ಮತ್ತು ನಾಲ್ವರು ಗಾಯಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.
ಮೃತನನ್ನು ರಾಜನ್ ಒರಂಗ್ (30) ಎಂದು ಗುರುತಿಸಲಾಗಿದೆ. ಇವರು ಪಂಜಾಬ್ ರಾಜ್ಯದ ನಿವಾಸಿಯಾಗಿದ್ದಾರೆ.
ಎರ್ನಾಕುಲಂನ ಕಕ್ಕನಾಡ್‌ನಲ್ಲಿರುವ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ರಾಸಾಯನಿಕ ಪದಾರ್ಥಗಳನ್ನು ಶೇಖರಿಸಿದ್ದ ಸ್ಥಳದಲ್ಲಿ ಈ ಸ್ಫೋಟ ಸಂಭವಿಸಿದೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.