ಹೊಸದಿಗಂತ ವರದಿ ಮೈಸೂರು:
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಚನ್ನಗುಂಡಿ ಗ್ರಾಮದಂಚಿನಲ್ಲಿ ಸಂಭವಿಸಿದೆ.
ಗ್ರಾಮದ ನಿವಾಸಿ ಮಹೇಂದ್ರ (35) ಮೃತ ದುರ್ದೈವಿ. ಕಟ್ಟಿಗೆ ತರಲೆಂದು ಗ್ರಾಮದಂಚಿನಲ್ಲಿರುವ ಜಮೀನಿಗೆ ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಕಾಡಾನೆ ಹಠಾತ್ತನೆ ದಾಳಿ ನಡೆಸಿ, ತುಳಿದು ಸಾಯಿಸಿದೆ.
ಈ ಬಗ್ಗೆ ಸರಗೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.