ಮಧ್ಯಪ್ರದೇಶದಲ್ಲಿ ವಿಕಾಲಾಂಗನ ಮೇಲೆ ದೌರ್ಜನ್ಯ: ಆರೋಪಿಗೀಗ ಜೈಲೂಟವೇ ಗತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ವಿಕಲ ಚೇತನ ವಯೋವೃದ್ಧನೊಬ್ಬನನ್ನು ಥಳಿಸಿ ಕೊಂದ ಆರೋಪದ ಮೇಲೆ ನೀಮುಚ್ ಜಿಲ್ಲೆಯ ವ್ಯಕ್ತಿಯನ್ನು ಮಧ್ಯಪ್ರದೇಶ ಪೋಲೀಸರು ಬಂಧಿಸಿದ್ದಾರೆ.

ಈ ಕುರಿತು ಮಧ್ಯಪ್ರದೇಶದ ಪೋಲೀಸ್‌ ವರಿಷ್ಠಾಧಿಕಾರಿ ಸೂರಜ್‌ ಕುಮಾರ್‌ ಪ್ರತಿಕ್ರಿಯಿಸಿದ್ದು “ವಿಕಲಾಂಗ ವ್ಯಕ್ತಿಯೊಬ್ಬನನ್ನು ಹೊಡೆದು ಸಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ” ಎಂದಿದ್ದಾರೆ.

ನೀಮಚ್‌ ಜಿಲ್ಲೆಯಲ್ಲಿ ಶುಕ್ರವಾರ ಭನ್ವರ್‌ಲಾಲ್ ಜೈನ್ ಎಂಬ ವಿಕಲಚೇತನ ವಯೋವೃದ್ಧರನ್ನು ಹೊಡೆದು ಕೊಂದಿರುವ ಘಟನೆ ವರದಿಯಾಗಿತ್ತು. ಅಲ್ಲದೇ ಗುರುತಿನ ಚೀಟಿ ತೋರಿಸುವಂತೆ ಒತ್ತಾಯಿಸಿ ವೃದ್ಧನನ್ನು ಥಳಿಸುತ್ತಿರುವ ವೀಡಿಯೋ ವೈರಲ್‌ ಆಗಿತ್ತು. ನಂತರದಲ್ಲಿ ಆ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದರು. ಪ್ರಸ್ತುತ ಆರೋಪಿಯನ್ನು ಗುರುತಿಸಿ ಐಪಿಸಿ ಸೆಕ್ಷನ್ 302 ಮತ್ತು 304 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!