Thursday, March 23, 2023

Latest Posts

ಕೇರಳದ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 1 ಸಾವು, 6 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇರಳದ ಎರ್ನಾಕುಲಂ ಜಿಲ್ಲೆಯ ವರಪುಳದಲ್ಲಿ ಮಂಗಳವಾರ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ವರಪುಳ ಬಳಿಯ ಪಟಾಕಿ ತಯಾರಿಕಾ ಘಟಕ ಜನವಸತಿ ಪ್ರದೇಶದಲ್ಲಿದೆ. ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಪ್ರದೇಶದಲ್ಲಿ ಅಸ್ತವ್ಯಸ್ತವಾಗಿದೆ.

ಘಟನೆಯ ಬಗ್ಗೆ ಜನರು ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ವಾಹನಗಳು ತಕ್ಷಣ ಸ್ಥಳಕ್ಕೆ ಆಗಮಿಸಿವೆ, ನಂತರ ಬೆಂಕಿ ನಂದಿಸುವ ಯತ್ನ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!