ಹೊಸದಿಗಂತ ವರದಿ ಮೈಸೂರು:
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಮಧುಗಿರಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮರದೂರು ಗ್ರಾಮದ ನಿವಾಸಿ ಕಿರಣ್ ಮೃತಪಟ್ಟ ಬೈಕ್ ಸವಾರನಾಗಿದ್ದು, ಹಿಂಬದಿ ಸವಾರ ರಾಜೇಶ್ ಎಂಬಾತ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಇವರಿಬ್ಬರು ಕಾಳೇಗೌಡನಕೊಪ್ಪಲು ಗ್ರಾಮದಿಂದ ಬೈಕ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಕಿರಣ್ ತಲೆಗೆ, ದೇಹದ ವಿವಿಧ ಭಾಗಗಳಿಗೆ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಿಳಿಕೆರೆ ಠಾಣೆಯ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.