ಹೊಸದಿಗಂತ ಡಿಜಿಟಲ್ ಡೆಸ್ಕ್:
ತರಬೇತಿ ನಿರತ ಲಘು ವಿಮಾನವೊಂದು ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮೇದಕ್ ಬಳಿ ನಡೆದಿದೆ.
ಮೇದಕ್ ನ ತೂಪ್ರಾನ್ ಎಂಬಲ್ಲಿ ವಿಮಾನ ಪತನಗೊಂಡು ಹೊತ್ತಿ ಉರಿದಿದೆ. ಈ ಲಘು ವಿಮಾನದಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಓರ್ವ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ದುಂಡಿಗಲ್ ಏರ್ ಪೋರ್ಟ್ ಗೆ ಸೇರಿದ ಲಘು ವಿಮಾನ ಇದಾಗಿದ್ದು, ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.