Monday, September 25, 2023

Latest Posts

SHOCKING| ಶಿಮ್ಲಾ ಜಿಲ್ಲೆಯಲ್ಲಿ ಭಾರೀ ಸ್ಪೋಟ: ರೆಸ್ಟೋರೆಂಟ್‌ ರಕ್ತಸಿಕ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಮಾಚಲ ಪ್ರದೇಶದ ಶಿಮ್ಲಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಇಲ್ಲಿನ ಮಾಲ್ ರಸ್ತೆಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ಒಬ್ಬರು ಸಾವನ್ನಪ್ಪಿದ್ದರೆ, 10 ಮಂದಿ ಗಾಯಗೊಂಡಿರುವುದಾಗಿ ಶಿಮ್ಲಾ ಎಸ್ಪಿ ಸಂಜೀವ್ ಕುಮಾರ್ ಗಾಂಧಿ ಬುಧವಾರ ಬಹಿರಂಗಪಡಿಸಿದ್ದಾರೆ. ಈ ಸ್ಫೋಟದ ನಂತರ ಇಡೀ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಜನ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಗಾಂಧಿ ತಿಳಿಸಿದ್ದಾರೆ. ಸ್ಫೋಟದಿಂದಾಗಿ ಹಲವು ಅಂಗಡಿಗಳು ನಾಶವಾಗಿದ್ದರ ಬಗ್ಗೆಯೂ ವರದಿಯಾಗಿದೆ.

ಸಿಲಿಂಡರ್‌ ಒಡೆದು ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಫೋಟದ ರಭಸಕ್ಕೆ ಅಕ್ಕಪಕ್ಕದ ಮನೆಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಸ್ಫೋಟದ ಸದ್ದು ಹಲವಾರು ಕಿಲೋಮೀಟರ್ ದೂರಕ್ಕೆ ಕೇಳಿಸಿತು. ಗಾಯಾಳುಗಳನ್ನು ಕೂಡಲೇ ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದ ನಂತರ, ಪೊಲೀಸರು ಮತ್ತು ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿತು. ಸ್ಫೋಟಕ್ಕೆ ಕಾರಣಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!