ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈ ಬಂದರಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಂದರಿನಲ್ಲಿ ನೌಕೆಯನ್ನು ದುರಸ್ತಿ ಮಾಡುತ್ತಿದ್ದ ವೇಳೆ ಕಾರ್ಮಿಕರು ಗ್ಯಾಸ್ ಕಟ್ಟರ್ ಅನ್ನು ಬಳಸಿದ್ದಾರೆ. ಈ ವೇಳೆ ಬೆಂಕಿ ಕಿಡಿ ಪೈಪ್ ಲೈನ್ ಮೇಲೆ ಬಿದ್ದಿದೆ. ಇದರಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೂವರು ಗಾಯಗೊಂಡಿದ್ದು, ಅವರನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೆನ್ನೈ ಬಂದರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.