ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಸಾಯನಿಕ ಸ್ಫೋಟ ಸಂಭವಿಸಿ, ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅಫ್ಜಲಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಗೌಳಿಗುಡ ಗೋಲ್ ಮಸೀದಿ ಹಿಂಭಾಗದ ಮೊಗರಂ ಬಸ್ತಿಯಲ್ಲಿ ಭಾನುವಾರ ನಡೆದಿದೆ. ಪೊಲೀಸರ ಪ್ರಕಾರ, ಮ್ಯಾನ್ಹೋಲ್ಗೆ ಕೆಮಿಕಲ್ ಹಾಕಿ ನೀರು ಸುರಿಯುವಾಗ ದೊಡ್ಡ ಸ್ಫೋಟ ಸಂಭವಿಸಿದೆ. ಇದರಿಂದ ಭರತ್ ಬಾಥೋಡ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ಗೋಪಾಲ್ ಬಾಥೋಡ್ ಎಂಬ ವ್ಯಕ್ತಿ ಗಾಯಗೊಂಡಿದ್ದಾರೆ. ಇಬ್ಬರು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಮಗ ಸಾವನ್ನಪ್ಪಿದ್ದು, ತಂದೆ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಕ್ಲೂಸ್ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಸಂಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.