ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಡೆಂಗ್ಯೂ ಜ್ವರಕ್ಕೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಮೊಹಮ್ಮದ್ ಮೀರಾನ್ ಸಾದಾ (77) ಮೃತರು. ಭಟ್ಕಳದ ಖಾಜಿಯಾ ಸ್ಟ್ರೀಟ್ ನಿವಾಸಿ.
ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಡೆಂಗ್ಯೂ ಜ್ವರಕ್ಕೆ ಯುವಕನೊಬ್ಬ ಬಲಿಯಾಗಿದ್ದ. ಇದರ ಬೆನ್ನಲ್ಲೇ ಇಂದು ವೃದ್ಧರೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂನಿಂದ ಸಾವನ್ನಪ್ಪಿದವರ ಸಂಖೈ ಎರಡಕ್ಕೆ ಏರಿಕೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.