ಗೂಡ್ಸ್ ವಾಹನ ಡಿಕ್ಕಿ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ವಿದ್ಯಾರ್ಥಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟ್ಯೂಷನ್‌ನಿಂದ ಮನೆಗೆ ವಾಪಾಸಾಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾನೆ.

ಸುಚೀತ್ (10) ಮೃತ ವಿದ್ಯಾರ್ಥಿ. ಆಗಸ್ಟ್​ 9ರಂದು ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಟ್ಯೂಷನ್‌ ಮುಗಿಸಿ ಮನೆಯತ್ತ ಸಾಗುತ್ತಿದ್ದ ಐವರು ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿಯಾಗಿತ್ತು. ಈ ವೇಳೆ ಶಾಲಿನಿ(8), ದರ್ಶನ್(5) ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮೂವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಆ ಮೂವರಲ್ಲಿ ಓರ್ವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಈ ಕುರಿತು ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!