ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪಟ್ಟಣದಲ್ಲಿ ಭಾರತೀಯ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ ಉರಿಯ ಹತ್ಲಂಗಾ ಪ್ರದೇಶದಲ್ಲಿ ಎನ್ಕೌಂಟರ್ ನಡೆಯಿತು.
ಇದಕ್ಕೂ ಮುನ್ನ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಶೋಧ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದ ಗಡೋಲ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಸತತ ನಾಲ್ಕನೇ ದಿನವೂ ಭಾರತೀಯ ಸೇನೆಯು ಕಾರ್ಯಾಚರಣೆಯನ್ನು ಮುಂದುವರೆಸಿದೆ.