ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಮೈಸೂರು:
ಕೊರೋನಾ ವೈರಾಣು ಹರಡುವಿಕೆ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಸರ್ಕಾರದ ನಿಯಮದಂತೆ ಜಿಲ್ಲೆಯ ಶಾಸಕರು, ಸಂಸದರ ಜೊತೆ ಚರ್ಚಿಸಿದ ನಂತರ ಜೂನ್ 21ರ ತನಕ ಲಾಕ್ ಡೌನ್ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಶುಕ್ರವಾರ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಏಷಿಯನ್ ಪೆಂಟ್ಸ್ ಹಾಗೂ ನೆಸ್ಲೆ ಕಂಪನಿಯು ಸ್ಯಾನಿಟೈಸರ್ ಹಾಗೂ ಆಕ್ಸಿಜನ್ ಕಾನ್ಸಂಟೇಟರ್ ಅನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು,
ಕೋವಿಡ್ ನಂತಹ ಕಷ್ಟಕಾಲದಲ್ಲಿ ರಾಜ್ಯದಲ್ಲಿರುವ ಮೃಗಾಲಯಗಳಿಗೆ ಸಾಕಷ್ಟು ನಷ್ಟವಾಗಿದೆ. ಈ ಹಿನ್ನಲೆಯಲ್ಲಿ ಚಿತ್ರನಟ ದರ್ಶನ್ ಅವರ ಕರೆ ಮೇರೆಗೆ ಅವರ ಅಭಿಮಾನಿಗಳು ಒಂದು ಕೋಟಿ ಹಣವನ್ನು ನೀಡಿದ್ದಾರೆ. ಹೀಗಾಗಿ ಜಿಲ್ಲಾಡಳಿತದ ಪರವಾಗಿ ಅಭಿನಂದನೆಗಳನ್ನು ತಿಳಿಸಿದರು.
ಇದಾದ ನಂತರ ನಗರ ಬನ್ನಿಮಂಟಪದ ಯಲ್ಲಮ್ಮ ಕಾಲೋನಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಆಹಾರದ ಕಿಟ್ ಗಳನ್ನು ಸಚಿವರು ವಿತರಿಸಿದರು. ಬಳಿಕ ಅರಗು ಮತ್ತು ಬಣ್ಣದ ಕಾರ್ಖಾನೆಗೆ ತೆರಳಿ ಕಾರ್ಮಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣೀಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿಇಒ ಎ.ಎಂ.ಯೋಗೀಶ್, ಮೈಸೂರು ನಗರ ಪಾಲಿಕೆ ಆಯುಕ್ತ ಜಿ.ಲಕ್ಷಿ÷್ಮಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.