‘ಒಂದು ರಾಷ್ಟ್ರ-ಒಂದು ಚುನಾವಣೆ’ ಅಧ್ಯಯನಕ್ಕಾಗಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದು ರಾಷ್ಟ್ರ, ಒಂದು ಚುನಾವಣೆ ಬಗೆಗಿನ ಸಾಧಕ ಭಾದಕಗಳನ್ನು ತಿಳಿಯಲು ಇಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ವಿಷಯವಾಗಿ ಸಾಕಷ್ಟು ಅಧ್ಯಯನದ ಅಗತ್ಯವಿದೆ. ಈ ಬಗೆಗಿನ ಸಾಧ್ಯತೆ ಬಗ್ಗೆ ಹೆಚ್ಚಿನ ವಿಷಯಗಳನ್ನು ಅರಿಯಲು ವಿಶೇಷ ಸಮಿತಿ ರಚನೆಯಾಗಿದ್ದು, ಸಮಿತಿಯ ಸದಸ್ಯರ ಬಗ್ಗೆ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಾಗುವುದು.

ಈಗಾಗಲೇ ಚರ್ಚೆಯಲ್ಲಿರುವ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಯು ಇನ್ನೂ ಸ್ವಲ್ಪ ಸಮಯ ಸರ್ಕಾರದ ಕಾರ್ಯಸೂಚಿಯಲ್ಲಿ ಇರಲಿದೆ. ಸೆ.18ರಿಂದ 22 ರವರೆಗೆ ನಡೆಯುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಬಗೆಗಿನ ಮಸೂದೆ ಮಂಡನೆ ಸಾಧ್ಯತೆ ಇದೆ.

ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಜನರಿಗೆ ಯಾವ ಅಭಿಪ್ರಾಯವಿದೆ, ಕೇಂದ್ರಾಡಳಿತ ಪ್ರದೇಶದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ, ಪಕ್ಷಗಳು ಈ ಬಗ್ಗೆ ಏನು ಚಿಂತಿಸುತ್ತಿವೆ ಎನ್ನುವುದನ್ನು ಅಧ್ಯಯನ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!