ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಸಂಪುಟ ಇಂದು (ಸೆ.18) ರಂದು ಅಂಗೀಕರಿಸಿರುವ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆ ಕಾರ್ಯಸಾಧುವಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಖರ್ಗೆ ಅವರು, ಕೆಲ ರಾಜ್ಯಗಳ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜನರ ಗಮನ ಬೇರೆಡೆ ಸೆಳೆಯಲು ಇಂಥ ತಂತ್ರವನ್ನು ಹೂಡಿದೆ ಎಂದು ಹೇಳಿದ್ದಾರೆ.
ಇದು ಪ್ರಯೋಗಿಕವಾಗಿ ಅಸಾಧ್ಯ. ಚುನಾವಣೆ ಸಮೀಪಿಸುತ್ತಿರುವಾಗ ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಂತಹ ವಿಷಯಗಳನ್ನು ಮುಂದಿಡುತ್ತದೆ ಎಂದು ಆರೋಪಿಸಿದರು.
ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ.
ಪಾಪ…! ಈ INDIA ಒಕ್ಕೂಟದ ಎಲ್ಲಾ ಪಕ್ಷಗಳ ಎಲ್ಲಾ ನಾಯಕರೂ ಏಕಕಾಲದಲ್ಲಿ ಚುನಾವಣೆ ನಡೆಯುವುದನ್ನು
ಎದುರಿಸಲು ಸಿದ್ಧರಿಲ್ಲ.ಮಾತ್ರವಲ್ಲದೆ ಪರಿಣಾಮದ ಬಗ್ಗೆ ಭಯಭೀತರಾಗಿರುವರು.ಹೊಸ ಮನ್ವಂತರ ಶುಭಾರಂಭ ಇಲ್ಲಿಂದಲೇ ಪ್ರಾರಂಭ…..!!!