ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದು ರಾಷ್ಟ್ರ, ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಏಕತೆಗೆ ಕರೆ ನೀಡಿದರು ಮತ್ತು ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಅದರ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.

ನಂತರ ಅವರು ರಾಷ್ಟ್ರೀಯ ಏಕತೆ ಮತ್ತು ದೀಪಾವಳಿಗಾಗಿ ಶುಭ ಹಾರೈಸಿದರು. ಪ್ರಪಂಚದ ಅನೇಕ ದೇಶಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತದೆ. ಈ ಹಬ್ಬವು ಭಾರತವನ್ನು ಇಡೀ ಪ್ರಪಂಚದೊಂದಿಗೆ ಸಂಪರ್ಕಿಸುತ್ತದೆ. ಅನೇಕ ದೇಶಗಳಲ್ಲಿ ಇದನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಸಮಯದಲ್ಲಿ ಏಕತಾ ದಿವಸ್ ಆಚರಣೆ ಮಾಡುತ್ತಿರುವುದು ವಿಶಿಷ್ಟತೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಯನ್ನು ಈಗಾಗಲೇ ಈ ವರ್ಷದ ಆರಂಭದಲ್ಲಿ ಕ್ಯಾಬಿನೆಟ್‌ನಲ್ಲಿ ಅಂಗೀಕರಿಸಲಾಗಿದ್ದು, ಮುಂದಿನ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಜೊತೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಧಿಸುವಲ್ಲಿ ಸಹಕಾರಿಯಗುತ್ತದೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!