ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ʼಒಂದು ರಾಷ್ಟ್ರ, ಒಂದು ಚುನಾವಣೆʼ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ.
ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಪ್ರಸ್ತುತ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ ಪ್ರಸ್ತುತ ಅಧಿಕಾರಾವಧಿಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿತ್ತು. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ 100 ದಿನಗಳನ್ನು ಪೂರೈಸಿದ ನಂತರ, ಆಡಳಿತಾರೂಢ ಮೈತ್ರಿಕೂಟದಲ್ಲಿನ ಒಗ್ಗಟ್ಟು ಉಳಿದ ಅವಧಿಯಲ್ಲೂ ಉಳಿಯುತ್ತದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಎಂಬುದನ್ನೂ ಪ್ರಮುಖ ಭರವಸೆಯಾಗಿ ಸೇರಿಸಲಾಗಿತ್ತು.