ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಒಂದು ರಾಷ್ಟ್ರ-ಒಂದು ಚುನಾವಣೆ’ ಪರಿಕಲ್ಪನೆಯನ್ನು ಜಾರಿಗೆ ತಂದರೆ ಅದು ದೇಶದ ದಿಕ್ಕನ್ನೇ ಬದಲಾಯಿಸುತ್ತದೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ಸೇಡಂ ಬಳಿ ನಡೆದ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಕೋವಿಂದ್, ಒಂದು ದೇಶ, ಒಂದು ಚುನಾವಣೆಯಿಂದ ಸಮಯ, ಶಕ್ತಿ ಮತ್ತು ಹಣವನ್ನು ಉಳಿಸಲು ಸಾಧ್ಯವಾಗುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರಿಗೆ ವರದಾನವಾಗಲಿದೆ ಎಂದು ಹೇಳಿದ್ದಾರೆ.
ದೇಶದ ಮಾಜಿ ರಾಷ್ಟ್ರಪತಿಗಳು ತಮ್ಮ ಅಧ್ಯಕ್ಷತೆಯ ಸಮಿತಿ ಸಲ್ಲಿಸಿದ ವರದಿಯಲ್ಲಿ, ಸಂಸತ್ತು, ಶಾಸಕಾಂಗ ಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು 100 ದಿನಗಳಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆ ಜಾರಿಗೆ ಬಂದರೆ, ಪದೇ ಪದೇ ಚುನಾವಣೆಗಳಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಆಗುವ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ಅದು ಸಮಯ, ಶಕ್ತಿ ಮತ್ತು ಹಣವನ್ನು ಉಳಿಸುತ್ತದೆ ಎಂದು ಹೇಳಿದರು.
ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿ 18526 ಪುಟಗಳ ವರದಿಯನ್ನು ಸಲ್ಲಿಸಿದೆ ಎಂದು ಹೇಳಿದರು. ವರದಿ ಸಲ್ಲಿಸುವ ಮೊದಲು, ಸಮಿತಿಯು ತಜ್ಞರು, ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಬಹುತೇಕ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿದೆ.