ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲೀಯನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಬೆಳಿಗ್ಗೆ ಭದ್ರತಾ ಸಿಬ್ಬಂದಿಯ ತಂಡವೊಂದು ನಕ್ಸಲೀಯ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ, ಆ ಪ್ರದೇಶದಲ್ಲಿ ಮಾವೋವಾದಿ ಕಾರ್ಯಕರ್ತರು ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದರು.

