ಜಮ್ಮು ಕಾಶ್ಮೀರದಲ್ಲಿ ಸೇನಾಪಡೆಗಳ ಭರ್ಜರಿ ಬೇಟೆ; ಇಬ್ಬರು ಲಷ್ಕರ್‌ ಉಗ್ರರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಏಪ್ರಿಲ್ 4 ರಂದು ಸಿಎಆರ್‌ಪಿಎಫ್‌ ಸಿಬ್ಬಂದಿ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಸೇರಿದಂತೆ ಇಬ್ಬರು ಉಗ್ರರನ್ನು ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌ ಮಾಡಲಾಗಿದೆ. ಗುಂಡಿನ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಯವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿಶೆಂಬರ್‌ ನಗರ ಪ್ರದೇಶದಲ್ಲಿ ಲಷ್ಕರ್-ಎ-ತೋಯ್ಬಾ ಸಂಗಟನೆಗೆ ಸೇರಿದ ಉಗ್ರರು ಇರುವ ಖಚಿತ ಮಾಹಿತಿ ಮೃರೆಗೆ ಕಾರ್ಯಾಚರಣೆ ಕೈಗೊಂಡಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಅದರಲ್ಲಿ ಓರ್ವ ಸಿಆರ್‌ಪಿಎಪ್‌ ಸಿಬ್ಬಂದಿ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದವ ಎನ್ನಲಾಗಿದ್ದು, ಮತ್ತೊಬ್ಬ ಉಗ್ರ ಸಂಘಟನೆಗೆ ಸೇರಿದ್ದವನಾಗಿದ್ದಾನೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!