ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಒಕ್ಕಲಿಗ ಪಾಲಿಟಿಕ್ಸ್ ಪ್ರಾಬಲ್ಯ ಮೆರೆದಿದೆ. ಒಕ್ಕಲಿಗ ಸಮುದಾಯದ ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಕೆಳಗೆ ಇಳಿಸಿದ್ದು ಯಾರು? ಇದನ್ನು ಕೇಳುವ ಶಕ್ತಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಇದೆಯಾ? ಎಂಬ ಡಿಕೆಶಿ ಹೇಳಿಕೆಯು ಈಗ ಹೊಸ ತಿರುವು ಪಡೆದಿದೆ.
ಹೆಚ್ ಡಿಕೆ ನಿರ್ಮಲಾನಂದನಾಥ ಶ್ರೀಗಳ ಅವರ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ಆರೋಪ ಮಾಡಿದ್ದಾರೆ. ಇದೀಗ ಹೆಚ್ ಡಿಕೆ ಈ ಕುರಿತು ಪ್ರತಿಕ್ರಿಯಿಸಿ, ಫೋನ್ ಕದ್ದಾಲಿಕೆ ಮಾಡಿದ್ದರೆ ನಾನೇಕೆ ಸರ್ಕಾರ ಉರುಳಿಸುತ್ತಿದ್ದೆ. ಅಗತ್ಯ ಬಿದ್ದರೆ ಮತ್ತೊಮ್ಮೆ ತನಿಖೆ ನಡೆಸುವಂತೆಯೂ ಸವಾಲು ಹಾಕಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ರಾಮನಾಥಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಾನು ಫೋನ್ ಟ್ಯಾಪಿಂಗ್ ಮಾಡಿಕೊಳ್ಳುತ್ತಿದ್ದರೆ ನನ್ನ ಸರಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ? ತನಿಖೆ ಮಾಡಿಕೊಳ್ಳಲಿ, ಈವರೆಗೆ ತನಿಖೆ ಮಾಡಿದರಲ್ಲ, ಅದು ಏನಾಯಿತು? ಎಂದು ಕಿಡಿಕಾರಿದ್ದಾರೆ.