ಚಲಿಸುತ್ತಿದ್ದ ಎಸಿ ಬಸ್‌ಗೆ ಬೆಂಕಿ: ಓರ್ವ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಲಿಸುತ್ತಿದ್ದ ಎಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಪಶ್ಚಿಮ ಮಿಡ್ನಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 16 ರ ಮದ್ಪುರ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಒಡಿಶಾದಿಂದ ಪಾರಾದೀಪ್‌ ಕಡೆಗೆ ಚಲಿಸುತ್ತಿದ್ದ ಎಸಿ ಬಸ್‌ನಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಪ್ರಯಾಣಿಕರು ಪ್ರಾಣ ರಕ್ಷಿಸಿಕೊಳ್ಳಲು ಬಸ್‌ನಿಂದ ಕೆಳಗಿಳಿದಿದ್ದಾರೆ. ಆದರೆ ಈ ವೇಳೆ ಓರ್ವ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!