ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅರೆನೂರು ಗ್ರಾಮದಲ್ಲಿ ನಡೆದಿದೆ.
ಮೃತನನ್ನು ದುರ್ಗಾ ಕಿನ್ನಿ (60) ಎಂದು ಗುರುತಿಸಲಾಗಿದೆ.
ದುರ್ಗಾ ಅವರು ಅರಣ್ಯ ಪ್ರದೇಶದ ಕಾಲು ದಾರಿಯಲ್ಲಿ ನಡೆದು ಹೋಗುವಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಆಗ ಗಾಬರಿಗೊಂಡು ಕಾಡಾನೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಕಾಡಾನೆಯು ದುರ್ಗಾ ಅವರನ್ನು ತುಳಿದು ಹಾಕಿದೆ. ಪರಿಣಾಮ ಗಂಭೀರ ಗಾಯಗೊಂಡ ದುರ್ಗಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಲ್ದೂರು ವಲಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.