Sunday, December 3, 2023

Latest Posts

ಬಸ್‌ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಸಹ ಸವಾರ ಸ್ಥಳದಲ್ಲೇ ಸಾವು!‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಸಹ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ.

ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ವೆಂಕಟಗಿರಿಕೋಟೆ ಸಮೀಪ ಈ ಅಪಘಾತ ಸಂಭವಿಸಿದೆ.

ವಡಿವೇಲು (45) ಮೃತ ದುರ್ದೈವಿ. ಬೈಕ್‌ ಸವಾರರು ನಂದಿ ಬೆಟ್ಟಕ್ಕೆಂದು ತೆರಳುತ್ತಿದ್ದರು. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತ್ತಿದ್ದ ವಡಿವೇಲು ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್‌ ಚಲಾಯಿಸುತ್ತಿದ್ದ ಮಧು ಸಣ್ಣ-ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ದೇವನಹಳ್ಳಿಯ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!