ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ಶ್ರೇಣಿ, ಒಂದು ಪಿಂಚಣಿ ಯೋಜನೆಯಡಿ (One Rank One Pension Scheme) ನಿವೃತ್ತ ಸೇನಾ ಕ್ಯಾಪ್ಟನ್‌ಗಳ ಪಿಂಚಣಿ ಕುರಿತು ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆ ಸುಪ್ರೀಂ ಕೋರ್ಟ್, ಪಿಂಚಣಿಯನ್ನು ಶೇಕಡಾ 10 ರಷ್ಟು ಹೆಚ್ಚಿಸಬೇಕು. ನವೆಂಬರ್ 14ರೊಳಗೆ ಎಲ್ಲಾ ಪಿಂಚಣಿ ಸಮಸ್ಯೆಗಳನ್ನು ಸರಿಪಡಿಸಲು ಸರ್ಕಾರಕ್ಕೆ ಆದೇಶಿಸಿದೆ.
ಜೊತೆಗೆ ಕೇಂದ್ರ ಸರ್ಕಾರಕ್ಕೆ 2 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕೇಂದ್ರ ಸರ್ಕಾರ ದಂಡವನ್ನು ಒಂದು ತಿಂಗಳೊಳಗೆ ಸಶಸ್ತ್ರ ಪಡೆಗಳ ಕಲ್ಯಾಣ ನಿಧಿಗೆ ಜಮೆ ಮಾಡಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 25ಕ್ಕೆ ಮುಂದೂಡಲಾಗಿದೆ.
2021ರಿಂದ ಒನ್ ರ‍್ಯಾಂಕ್, ಒನ್ ಪೆನ್ಷನ್ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.