ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯ್ದ ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದ್ದು, ಈಗಾಗಲೇ ಟೆಕೆಟ್ ಗಾಗಿ ಅರ್ಜಿ ಸಲ್ಲಿಸುವ ಕಾರ್ಯ ಮುಗಿದಿದೆ. ಇದಾದ ಬಳಿಕ ಕಾಂಗ್ರೆಸ್ ನಿಂದ ಒಬ್ಬರಿಗೆ ಒಂದೇ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದು, ಸಿದ್ಧರಾಮಯ್ಯ ಬೆಂಬಲಿಗರು ಗರಂ ಆಗಿದ್ದಾರೆ .
ಶಿವಕುಮಾರ್ ನೀಡಿದ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಎಷ್ಟು ಟಿಕೆಟ್ ನೀಡಬೇಕು ಎಂಬುದರ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಟಿಕೆಟ್ ಹಂಚಿಕೆ ಬಗ್ಗೆ ಚುನಾವಣಾ ಸಮಿತಿ ತೀರ್ಮಾನಿಸಿ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡುತ್ತದೆ. ಎಐಸಿಸಿ ಅಧ್ಯಕ್ಷರ ನೇತೃತ್ವದ ಸಿಡಬ್ಲ್ಯೂಸಿ ಕೇಂದ್ರ ಚುನಾವಣಾ ಸಮಿತಿಯವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.