Thursday, June 30, 2022

Latest Posts

ಶ್ರೀನಗರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಭದ್ರತಾ ಪಡೆ ಅಡಗಿದ್ದ ಉಗ್ರರ ಮೇಲೆ ಕಾರ್ಯಾಚೆಣೆ ನಡೆಸಿದೆ. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.
ಶ್ರೀನಗರದ ಹರ್ವಾನ್‌ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ ಎಂದು ಜಮ್ಮು ಪೊಲೀಸರು ಮಾಹಿತಿ ನೀಡಿದ್ದಾರೆ.
ಎನ್‌ ಕೌಂಟರ್‌ ಬಳಿಕ ಇದೀಗ ಘಟನಾ ಸ್ಥಾಳದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss