ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇರಳದಲ್ಲಿ ಕೊರೋನಾ ಹೆಚ್ಚಿರುವ ಕಾರಣ ಕೇರಳದಿಂದ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಒಂದು ವಾರಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ಮುಂದಿನ ದಿನಗಳಲ್ಲಿ ಸರ್ಕಾರದ ನೀತಿ ನಿಯಮಗಳ ಬಗ್ಗೆ ಚರ್ಚೆ ಮಾಡಲಾಗುವುದು. ಸದ್ಯದ ಪರಿಸ್ಥಿತಿಯಲ್ಲಿ ಕೇರಳದಲ್ಲಿ ದಿನೇ ದಿನೇಕೊರೊನಾ ಪ್ರಕರಣ ಹೆಚ್ಚುತ್ತಿದೆ ಎಂದು ತಜ್ಞರ ಜತೆ ಸಭೆ ನಂತರ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.
ಕೇರಳದಿಂದ ಬರುವವರಿಗೆ 1 ವಾರ ಕಡ್ಡಾಯ ಕ್ವಾರಂಟೈನ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಒಂದು ವಾರದ ನಂತರ ಕೊವಿಡ್ ಟೆಸ್ಟ್ ಮಾಡಿಸಬೇಕು ಎಂದು ತಿಳಿಸಲಾಗಿದೆ.
ಮದುವೆ ಸಮಾರಂಭಗಳಲ್ಲಿ 400 ಜನ ಸೇರಬಹುದು
ಇನ್ನು ಕಲ್ಯಾಣ ಮಂಟಪಗಳಲ್ಲಿ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗುವ ಬಗ್ಗೆ ಆರ್. ಅಶೋಕ್ ಹೇಳಿದ್ದಾರೆ. ಸಣ್ಣಪುಟ್ಟ ಛತ್ರಗಳಲ್ಲಿ ಶೇಕಡಾ 50 ರಷ್ಟು ಜನ ಸೇರಲು ಅವಕಾಶ ನೀಡಲಾಗುವುದು. ದೊಡ್ಡ ಛತ್ರಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.
ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿಸಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗುವುದು. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುತ್ತಿದ್ದೇವೆ ಎಂದು ಅಶೋಕ್ ಹೇಳಿದ್ದಾರೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರಿಯಲಿದೆ. ರಾತ್ರಿ 9 ರಿಂದ ಮುಂಜಾನೆ 5 ಗಂಟೆವರೆಗೆ ನೈಟ್ಕರ್ಫ್ಯೂ ಜಾರಿಯಲ್ಲಿ ಇರಲಿದೆ.