ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಮುಂದುವರಿಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೆಲ ಕೈಗಾರಿಕೆ ಹೊರತುಪಡಿಸಿ ಜಿಲ್ಲೆಯಲ್ಲಿ ಒಂದು ವಾರ ಲಾಕ್ಡೌನ್ ಮುಂದುವರೆಸಲು ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು. ಇದಕ್ಕೆ ಸಭೆಯಲ್ಲಿ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಮತ್ತೆ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್ಡೌನ್ ಮುಂದುವರಿಯಲಿದೆ ಎಂದರು.
ಇನ್ನು ಕೆಲ ವಿಷಯಗಳಿಗೆ ರಿಯಾಯಿತಿ ನೀಡುವ ಸಂಬಂಧ ಶುಕ್ರವಾರ ಸಂಸದರು, ಶಾಸಕರ ಸಭೆ ನಡೆಸಲಾಗುವುದು. ಕೂಲಿ ಮಾಡುವವರು ಮತ್ತು ಕೈಗಾರಿಕಾ ಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ಕೆಲವೊಂದು ಸಡಿಲಿಕೆ ಮಾಡಲಾಗುವುದು. ಆ ಬಗ್ಗೆ ಶುಕ್ರವಾರದ ಸಭೆಯಲ್ಲಿ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.