ರಸ್ತೆ ಅಪಘಾತ: ಓರ್ವ ಮಹಿಳೆ ಸಾವು, ಮೂವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದ್ವಿಚಕ್ರ ವಾಹನಕ್ಕೆ ಡಿಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 30 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೆಹಲಿಯ ನ್ಯೂ ಉಸ್ಮಾನ್‌ಪುರ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಳ ಪತಿ ಹಾಗೂ ಆಕೆಯ ಇಬ್ಬರು ಮಕ್ಕಳಿಗೂ ಗಾಯಗಳಾಗಿವೆ. ಘಟನೆಯ ಬಗ್ಗೆ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಚಾಲಕನನ್ನು ಕುನ್ವರ್ ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಮತ್ತು ಮೃತರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಐಪಿಸಿ ಸೆಕ್ಷನ್ 279/337/304ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!